ಬೆಂಗಳೂರು:
ಇತ್ತಿಚ್ಚಿಗೆ ದೇಶದಲ್ಲಿ ನಡೆದ ಲೋಕ ಸಭಾ ಚುನಾವಣೆಯಲ್ಲಿ ಚನ್ನಪಟ್ಟಣದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕ ಸಭಾ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗ ಸ್ಪರ್ಧೆ ಮಾಡಿ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ಈಗ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯಲ್ಲಿದ್ದು ಈ ಕ್ಷೇತ್ರ ಬಾರಿ ಪೈಪೋಟಿಗೆ ಸಾಕ್ಷಿಯಾಗಲಿದೆ ಆದರೆ ಈಗ ಇಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ಯಾರು ಗುಟ್ಟು ಬಿಟ್ಟುಕೊಟ್ಟಿಲ್ಲ ಇದರ ಮಧ್ಯೆ ಮಾಜಿ ಸಚಿವ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅಭ್ಯರ್ಥಿ ಆಯ್ಕೆ ಕುರಿತು ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಅವರು ಕಳೆದ ವಾರದಲ್ಲಿ ಡಿಸಿಎಂ ಡಿಕೆಶಿ ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ. ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರೋ ಸರ್ಕಾರಿ ಸಂತೆ. ಯಾವುದೇ ಗುರಿ ಇಲ್ಲದೇ, ಯೋಜನೆ ಇಲ್ಲದೇ ಮಾಡಿರೋ ಕಾರ್ಯಕ್ರಮ. ಅಧಿಕಾರಿಗಳನ್ನ ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ದ ವಾಗ್ವದಾಳಿ ನಡೆಸಿದ್ದಾರೆ.