ವಿಜಯಪುರ: ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮವಾಗಿ 174 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಒಟ್ಟು 35 ವಾರ್ಡ್ಗಳಿಗೆ 358 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಆ ಪೈಕಿ 119 ತಿರಸ್ಕೃತಗೊಂಡಿದ್ದು, 235 ನಾಮಪತ್ರಗಳು ಕ್ರಮಬದ್ಧವಾಗಿದ್ದವು.
ನಾಮಪತ್ರ ಹಿಂಪಡೆಯುವ ಅಂತಿಮ ದಿನವಾದ ಗುರುವಾರ 61 ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದು ಕೆಒನ್ನ್ಯೂಸ್ಗೆ ಮಾಹಿತಿ ಲಭ್ಯವಾಗಿದೆ. ಆ ಮೂಲಕ 174 ಅಭ್ಯರ್ಥಿಗಳು ಅಖಾಡದಲ್ಲಿ ಉಳಿದಿದ್ದಾರೆ.