ವಿಜಯಪುರ: ಅಭಿವೃದ್ಧಿ ಅಜೆಂಡಾದೊಂದಿಗೆ ಮಹಾನಗರ ಪಾಲಿಕೆ ಚುನಾವಣೆ ಎದುರಿಸಲು ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ್ ಹೇಳಿದರು.
ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ.
ಈಗಾಗಲೇ 180 ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಇನ್ನೂ ಅನೇಕರು ಟಿಕೆಟ್ ಬಯಸಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅಕ್ಟೋಬರ್ 12 ರ ಮಧ್ಯಾಹ್ನದವರೆಗೆ ಅರ್ಜಿ ತೆಗೆದುಕೊಳ್ಳಲಾಗುತ್ತಿದ್ದು, ಆ ಬಳಿಕ ಬಂದ ಯಾವುದೇ ಅರ್ಜಿ ಪಡೆಯಲಾಗಲ್ಲ. ಇನ್ನು ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.