ವಿಜಯಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಜಯಪುರದ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾನೆ.
ವಿಜಯಪುರ ತಾಲುಕಿನ ಜುಮನಾಳ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿ ಅಮಿತ್ ಮಾದರ್ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಇನ್ನು ಅಮೀತ್ ಮಾದರ ಮನೆ ಹಾಗೂ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಸಾಧನೆ ಮಾಡಿದ ಮಗನಿಗೆ ತಾಯಿ ಸಿಹಿ ತಿನ್ನಿಸಿದರು. ಅಲ್ಲದೇ, ಮಗ ತಾಯಿಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದನು.