ವಿಜಯಪುರ: ವಿಜಯಪುರ ನಗರದ ಯೋಗಾಪುರ ಅಕ್ರಮವಾಗಿ ಸಂಗ್ರಹಿಸಿದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ಉಪನಿರ್ದೇಶಕರ ನೇತೃತ್ವದ ತಂಡವು ವಶಪಡಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಮಾಹಿತಿ ನೀಡಿದರು.
ಸುಮಾರು 3.55 ಲಕ್ಷ ಕಿಮ್ಮತ್ತಿನ 161 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ. ಅಕ್ರಮ ವ್ಯವಹಾರ ಮಾಡುತ್ತಿರುವ ಗೂಡು ಲಾಲ ತುಬಾಕಿ ಎಂಬ ವ್ಯಕ್ತಿಯ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರ ಮೇರೆಗೆ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.