ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮೂರು ಕೋಟಿ ಹಣ ಜಪ್ತಿಗೈದಿದ್ದಾರೆ. ಇನ್ನು ಹುಬ್ಬಳ್ಳಿಯ ಆಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಮೇಶ್ ಬೊಣಗೇರಿ ಅವರ ನಿವಾಸದ ಮೇಲೆ ದಾಳಿ ಸಿಸಿಬಿನವರು ದಾಳಿಗೈದಿದ್ದಾರೆ. ಅಲ್ಲದೇ, ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಶಕ್ಕೆ ಪಡೆದುಕೊಂಡಿದ್ದಾರೆ. ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.