ವಿಜಯಪುರ: ಐತಿಹಾಸಿಕ ವಿಜಯಪುರ ನಗರದಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಎಲ್ಲ ಮಾಧ್ಯಮ ಮಿತ್ರರು ಹಾಗೂ ಜಿಲ್ಲೆಯ ನಾಗರಿಕರು ಸಹಕಾರ ನೀಡಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮನವಿ ಮಾಡಿದರು. ವಿಜಯಪುರ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಗಡಿಭಾಗದಲ್ಲಿ ನಡೆಯುವ ಈ ಸಮ್ಮೇಳನ ಹಲವು ವೈಶಿಷ್ಠ್ಯಗಳೊಂದಿಗೆ ಐತಿಹಾಸಿಕವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ರಾಜ್ಯದ ಬೇರೆ- ಬೇರೆ ಜಿಲ್ಲೆಗಳಿಂದ ಆಗಮಿಸುವ ಪ್ರತಿನಿಗಳಿಗೆ ಊಟ, ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಿ ಒಳ್ಳೆಯ ಆತಿಥ್ಯ ನೀಡಿದರೆ ಬೇರೆ ಜಿಲ್ಲೆಗಳಿಂದ ಬಂದ ಪ್ರತಿನಿಗಳು ಈ ಜಿಲ್ಲೆಯ ಬಗ್ಗೆ ಮನದಲ್ಲಿ ಸವಿನೆನಪು ಇಟ್ಟುಕೊಂಡು ತಮ್ಮೂರಿಗೆ ಹೋಗುವರು. ಈ ಸಮ್ಮೇಳನ ನಮ್ಮ ಮನೆಯ ಕಾರ್ಯಕ್ರಮವೆಂದು ತಿಳಿದು ಎಲ್ಲರೂ ಹುರುಪಿನಿಂದ ಒಗ್ಗೂಡಿ ಕೆಲಸ ಮಾಡುವ ಮೂಲಕ ಸಮ್ಮೇಳನದ ಯಶಸ್ಸಿಗೆ ಕಾರಣೀಭೂತರಾಗಬೇಕೆಂದರು. ಸಿದ್ಧೇಶ್ವರ ಶ್ರೀಗಳು ಈ ಸಮ್ಮೇಳನದ ಸಾನ್ನಿಧ್ಯ ವಹಿಸಲು ಸಂತೋಷದಿಂದ ಒಪ್ಪಿಕೊಂಡು ಸಮ್ಮೇಳನ ಗಡಿಭಾಗದಲ್ಲಿ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದ್ದರು. ಅವರ ಸಾನ್ನಿಧ್ಯದಲ್ಲಿ ಈ ಸಮ್ಮೇಳನ ನಡೆಯಬೇಕಾಗಿತ್ತು. ಆದರೆ ಅವರು ನಮ್ಮನ್ನಗಲಿರುವುದು ನಮಗೆಲ್ಲ ತುಂಬಾ ದುಃಖವನ್ನುಂಟು ಮಾಡಿದೆ ಎಂದರು. ಫೆ. 4 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಫೆ. 5 ಪ್ರತಿನಿಗಳ ಸಮಾವೇಶ ನಡೆಯುವುದು. ನಂತರ ಸಮಾರೋಪ ಸಮಾರಂಭ ಹಾಗೂ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸುವರು. ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭದಲ್ಲಿ ಹಲವಾರು ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಗಳು ಭಾಗವಹಿಸುವರು.
ಸಮ್ಮೇಳನದಲ್ಲಿ ನವಮಾಧ್ಯಮ ಮತ್ತು ಪತ್ರಕರ್ತರು, ಸುದ್ದಿಮಾಧ್ಯಮದಲ್ಲಿ ಮಹಿಳೆಯರು, ಗಡಿ ಮತ್ತು ಮಾಧ್ಯಮ ಎಂಬ ವಿಷಯ ಕುರಿತು ಮೂರು ಪ್ರಮುಖ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಇದರ ಜೊತೆಗೆ ಪತ್ರಿಕಾ ವಿತರಕರ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ಶಿವಾನಂದ ತಗಡೂರ ವಿವರಿಸಿದರು.
ಹಿರಿಯ ಪತ್ರಕರ್ತರಿಗೆ ಗೌರವ : ಇದೇ ಸಮ್ಮೇಳನದಲ್ಲಿ ಜಿಲ್ಲೆಯ ಹತ್ತು ಜನ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನವಿರುತ್ತದೆ ಎಂದರು. ಎರಡು ದಿನಗಳ ಈ ಸಮ್ಮೇಳನದಲ್ಲಿ ಐದು ಸಾವಿರಕ್ಕೂ ಅಕ ಪ್ರತಿನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ ಎರಡೂವರೆ ಸಾವಿರ ಜನ ಪ್ರತಿನಿಗಳ ನೋಂದಣಿಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು