ವಿಜಯಪುರ: ಆಕಸ್ಮಿಕವಾಗಿ ಬೆಂಕಿ ಅವಘಡದಲ್ಲಿ ಗಿಫ್ಟ್ ಅಂಗಡಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ವಿನೋದ ಬಡಿಗೇರ ಎಂಬುವರ ಗಿಫ್ಟ್ ಅಂಗಡಿ ಸುಟ್ಟು ಭಸ್ಮವಾಗಿದೆ. ಅಲ್ಲದೇ, ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಸುಮಾರು 5 ಲಕ್ಷ ಮೌಲ್ಯದ ವಿವಿಧ ವಸ್ತುಗಳು ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.