ವಿಜಯಪುರ: ದಾಖಲೆ ಇಲ್ಲದ 50 ಲಕ್ಷ ನಗದು ಸಾಗಿಸುವಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಚೆಕ್ ಪೋಸ್ಟ್ನಲ್ಲಿ ನಡೆದಿದೆ. ದಾಖಲೆ ಇಲ್ಲದ 50 ಲಕ್ಷ ರೂಪಾಯಿಯನ್ನು ಕಾರಿನಲ್ಲಿ ತೆಗೆದುಕೊಂಡು ಹೋಗುವಾಗ ಪತ್ತೆಯಾಗಿದೆ. ಹಣಕ್ಕೆ ಸೂಕ್ತ ದಾಖಲಾತಿ ಇಲ್ಲದ ಕಾರಣ ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಕಾರಿನಲ್ಲಿ ಹಣ ತೆಗೆದುಕೊಂಡು ಮೂವರು ವಿಜಯಪುರದಿಂದ ಚಿಕ್ಕಮಗಳೂರಿನ ಅಜ್ಜಂಪುರಕ್ಕೆ ಹೊರಟಿದ್ದರು. ಸ್ಥಳಕ್ಕೆ ಬಸವನ ಬಾಗೇವಾಡಿ ತಹಶಿಲ್ದಾರ್ ವೈ ಎಸ್ ಸೋಮಣಕಟ್ಟಿ, ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.