ವಿಜಯಪುರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿರುವ ಪರಿಣಾಮ ಆರು ಪ್ರಯಾಣಿಕರು ಅಸುನೀಗಿರುವ ಘಟನೆ ತುಮಕೂರಿನ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ವಿದ್ಯಾರ್ಥಿಗಳು ಸೇರಿ 6 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ರಸ್ತೆಯುದ್ದಕ್ಕೂ ರಕ್ತಸಿಕ್ತ ದೇಹಗಳು ಬಿದ್ದಿವೆ. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಇನ್ನೂ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.