ವಿಜಯಪುರ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಬಿದನೂರು ಪೆಟ್ರೋಲ್ ಪಂಪ್ ಹತ್ತಿರ ನಡೆದಿದೆ. ಇನ್ನು ಬೈಕ್ನಲ್ಲಿದ್ದ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಗಾಯಗೊಂಡವರ ಹೆಸರು ಹಾಗೂ ಮಾಹಿತಿ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.