ವಿಜಯಪುರ: ವೀಕೆಂಡ್ ಕರ್ಫ್ಯೂ ಹಿನ್ನಲೆ ತರಕಾರಿ ಮಾರುಕಟ್ಟೆ ಬಂದ್ ಮಾಡಿಸುತ್ತಿದ್ದಾರೆ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯಪುರ ನಗರದ ಗೋದಾವರಿ ಹೋಟೆಲ್ ಎದುರು ನಡೆದಿದೆ.
ರೊಚ್ಚಿಗೆದ್ದ ರೈತರಿಂದ ರಸ್ತೆಮೇಲೆ ತರಕಾರಿ ಚೆಲ್ಲಿ ಪ್ರತಿಭಟನೆ ನಡೆಸಿದರು. ಇನ್ನು ತರಕಾರಿ ಮಾರಾಟ ಮಾಡಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದು, ನಡು ರಸ್ತೆಯಲ್ಲೇ ನೂರಾರು ಜನರು ಜಮಾವಣೆಗೊಂಡಿದ್ದಾರೆ. ನಮಗೆ ತರಕಾರಿ ಮಾರಲು ಅವಕಾಶ ನೀಡಬೇಕು ಎಂದು ರೈತರು ಆಗ್ರಹಿಸಿದರು.