ವಿಜಯಪುರ: ಐದಕ್ಕಿಂತ ಹೆಚ್ಚು ಶಾಲಾ ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢವಾದ್ರೇ ಆ ಶಾಲೆಗೆ ರಜೆ ಘೋಷಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, 5 ಅಥವಾ ಅದಕ್ಕಿಂತ ಹೆಚ್ಚಿನ ಮಕ್ಕಳಿಗೆ ಒಂದೇ ಶಾಲೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾದರೆ ಆ ಶಾಲೆಗೆ ಒಂದು ವಾರಗಳ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದರು. ಜಿಲ್ಲೆಯಲ್ಲಿ 150 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಇನ್ನು ಜನವರಿ 1 ರಿಂದ 15 ರ ವರೆಗೆ ಒಟ್ಟು 664 ಜನರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅದರಲ್ಲಿ 664 ಜನರ ಪೈಕಿ 150 ಮಕ್ಕಳಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ ಎಂದರು.