ವಿಜಯಪುರ: ನಗರದ ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಅದಕ್ಕಾಗಿ ಇಂದಿನಿಂದ ಜನೇವರಿ27ವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅಕ್ಕಮಹಾದೇವಿ ವಿಶ್ವ ವಿದ್ಯಾಲಯದ ಕುಲಸಚಿವ ಮಾಹಿತಿ ನೀಡಿದರು. ವಿಶ್ವವಿದ್ಯಾಲಯದಲ್ಲಿ 5ಕ್ಕಿಂತ ಹೆಚ್ಚು ಸೋಂಕಿತರು ಕಂಡು ಬಂದ ಹಿನ್ನಲೆ ವಿದ್ಯಾರ್ಥಿನಿಯರು, ಸಿಬ್ಬಂದಿ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಿದ್ದಾರೆ. ಇನ್ನು ತುರ್ತು ಕೆಲಸ ಕಾರ್ಯವಿದ್ದಾಗ ಕಚೇರಿ ಕಾರ್ಯ ನಿರ್ವಹಿಸುವಂತೆ ಆದೇಶ ಹೊರಡಿಸಿದ್ದಾರೆ.