ವಿಜಯಪುರ: ಮಾನ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ, ಸರ್ಕಾರದ ನಿರ್ದೇಶನದಂತೆ ಇದೇ ಸೋಮವಾರದಿಂದ ಶಾಲೆಗಳನ್ನು ಆರಂಭಿಸುತ್ತಿದ್ದು, ಸಮವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದೇ ಎಲ್ಲ ಪೋಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಬಗ್ಗೆ ವಿವಾದಗಳು ಉದ್ಭವವಾಗುತ್ತಿರುವುದು ತಮಗೆ ತಿಳಿದ ವಿಷಯವಾಗಿದೆ. ಪ್ರಸ್ತುತ ಮಾನ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶದಂತೆ ಶಾಲೆಗಳನ್ನು ದಿನಾಂಕ:14-02-2022 ಸೋಮವಾರದಿಂದ ಪ್ರಾರಂಭಿಸಲು ಸರ್ಕಾರದ ನಿರ್ದೇಶನವಿರುತ್ತದೆ.
ಈ ಹಿನ್ನಲೆಯಲ್ಲಿ ಸೋಮವಾರದಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಕಾರಣ ಯಾವುದೇ ಉಹಾಪೋಹಗಳಿಗೆ ಕಿವಿಗೊಡದೆ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಎಲ್ಲ ಸಾರ್ವಜನಿಕರಿಗೆ, ಪೋಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.