ವಿಜಯಪುರ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿ ಸಮೇತ ಅಕ್ಕಿಯನ್ನು ಪೊಲೀಸರು ಜಪ್ತಿಗೈದಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ಅಂದಾಜು 50 ಕೆಜಿ ತೂಕದ 514 ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದಿದಾರೆ. ಇನ್ನೂ 4,59, 800 ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಲಕ್ಕಹಳ್ಳಿ ಗ್ರಾಮದ ಶಶಿಕುಮಾರ ಶಿವೇಗೌಡ ಹಾಗೂ ಎಲ್.ಎಂ. ಪ್ರಸಾದ ಎಂಬುವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.