ವಿಜಯಪುರ: ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಶಿವಾನಂದ ಗೊರ್ಜನವರ (40)ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೇಸ್ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ.