ವಿಜಯಪುರ: 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು.
ನಿಗಮ ಮಂಡಳಿ ಅಧ್ಯಕ್ಷ ವಿಜಗೌಡ ಪಾಟೀಲ್ ಸಮ್ಮೇಳನಕ್ಕೆ ಕನ್ನಡ ಧ್ವಜ ಬೀಸುವ ಮೂಲಕ ಚಾಲನೆ ನೀಡಿದರು. ತದನಂತರ ಸಮ್ಮೇಳನಾಧ್ಯಕ್ಷ ಡಾ. ಭುವನೇಶ್ವರಿ ಮೇಲಿನಮಠ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದ ವರೆಗೂ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಸಪಾ ಜಿಲ್ಲಾಧ್ಯಕ್ಷ ಹಾಸಿಂಪೀರಾ ವಾಲೀಕಾರ್, ಸಾಹಿತ್ಯಾಸಕ್ತರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.