ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ ಆಗಿದೆ. ಭೂಕಂಪನ ರಿಕ್ಟರ್ ಮಾಪಕದಲ್ಲು ದಾಖಲಾಗಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪನ 2.8 ತೀವ್ರತೆಯಲ್ಲಿ ಉಂಟಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ ಲಭ್ಯವಾಗಿದೆ. ವಿಜಯಪುರದ ಬಸವೇಶ್ವರ ನಗರ, ಉಕ್ಕಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪನ ಆಗಿದೆ.