ವಿಜಯಪುರ: ಕೆಎಸ್ಆರ್ಟಿಸಿ ಸುಹಾಸ್ ಬಸ್- ಬೈಕ್ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ
ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ.
ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿ ಬೈಕ್ ಸಿಲುಕಿಕೊಂಡಿದೆ. ಇನ್ನು ಮೃತರ ಹೆಸರು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.