ಧಾರವಾಡ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಸ್ಥಳದಲ್ಲಿ ಅಸುನೀಗಿರುವ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ನಡೆದಿದೆ.
ಧಾರವಾಡದಿಂದ ಸವದತ್ತಿಗೆ ಹೋಗುತ್ತಿದ್ದ ಲಾರಿಗೆ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಚಾಲಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಅಲ್ಲದೇ, ಚಾಲಕರ ಶವಗಳು ಲಾರಿಯಲ್ಲಿ ಸಿಲುಕಿವೆ. ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ…