ವಿಜಯಪುರ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಸಮಾಜದ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ರಾಜಶೇಖರ ಕುಚಬಾಳ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಆಹೇರಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದ ಮೇಲೆ ನಮ್ಮ ಭಾರತ ಇದೆ. ಅಂಬೇಡ್ಕರ್ ನಮ್ಮ ಜೀವನಕ್ಕೆ ಮೌಲ್ಯ ತಂದುಕೊಟ್ಟಿದ್ದಾರೆ. ಅದಕ್ಕಾಗಿ ಎಲ್ಲಾರೂ ಅಂಬೇಡ್ಕರ್ ತತ್ವಗಳನ್ನು ಪಾಲನೆ ಮಾಡಬೇಕು ಎಂದರು. ಈ ವೇಳೆಯಲ್ಲಿ ಡಿಎಸ್ಎಸ್ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.