ವಿಜಯಪುರ: ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ರಾಮಾಚಾರಿ ಈರಪ್ಪ ಗಡ್ಡಿ ಹಾಗೂ ನಾಗರಾಜ ಫಕ್ಕಿರಪ್ಪ ವಾಲ್ಮೀಕಿ ಬಂಧಿತ ಆರೋಪಿಗಳು. ಇನ್ನು ಬಂಧಿತರಿಂದ 5.75 ಲಕ್ಷ ಮೌಲ್ಯದ 11.5 ತೊಲಿ ಚಿನ್ನವನ್ನು ಪೊಲೀಸರು ಜಪ್ತಿಗೈದಿದ್ದಾರೆ. ಆರೋಪಿಗಳ ವಿರುದ್ಧ ಮೂರು ಕೇಸ್ ದಾಖಲು ಮಾಡಲಾಗಿದೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.