ವಿಜಯಪುರ: ಬೈಕ್ ಹಾಗೂ ಲಾರಿ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.
ಶಿವಣಗಿ ನಿವಾಸಿ ಬಸವರಾಜ್ ಕಲಬುರಗಿ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.