ವಿಜಯಪುರ: ವ್ಯಕ್ತಿಯ ಶವವೊಂದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಂಜಾರ್ ಹೋಟೆಲ್ ಬಳಿ ಪತ್ತೆಯಾಗಿದೆ.
38 ವರ್ಷದ ಮಲ್ಲಪ್ಪ ರೇವಪ್ಪ ರೂಗಿ ಎಂಬುವರ ಶವ ಪತ್ತೆಯಾಗಿದೆ. ಅಲ್ಲದೇ, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.