ವಿಜಯಪುರ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಕಲಿ ಹೋರಾಟ ಮಾಡುತ್ತಿದೆ ಎಂದು ನಟ ಹಾಗೂ ಹೋರಾಟಗಾರ ಚೇತನ್ ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾದಿ ಬೀದಿಗಿರೋ ಬಗ್ಗೆ ನಾನು ಮಾತನಾಡಲ್ಲ, ನಟ ಚೇತನ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದರು.
ಇಂಥ ತಲೆ ಹಿಡುಕ ಸಿದ್ಧಾಂತವಿಲ್ಲದ ವ್ಯಕ್ತಿಗಳಿಗೆ ಬಹಳ ಬೆಲೆ ಕೊಡಬೇಡಿ ಎಂದು ಮನವಿ ಮಾಡಿದರು. ಇಲ್ಲಿಯವರೆಗೆ ಅಂಬೇಡ್ಕರ್ ಅವರ ವಿಚಾರಗಳನ್ನು ಮುಚ್ಚಿಟ್ಟಿದ್ದೆ ದುರಂತ.
ಅಂಬೇಡ್ಕರ್ ಅವರ ಜೀವನ ಮತ್ತು ಅವರ ಸಾಹಿತ್ಯವನ್ನು ಎಲ್ಲರೂ ಅಧ್ಯಯನ ಮಾಡಬೇಕಿದೆ.
ಕೆಲ ಜನರು ತಮ್ಮ ಉಪ ಜೀವನಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಹಾಳು ಮಾಡುತ್ತಿದ್ದಾರೆ. ದಿ ಪಾರ್ಟಿಶನ್ ಆಫ್ ಪಾಕಿಸ್ತಾನ ಎಂಬ ಪುಸ್ತಕದಲ್ಲಿ ಅಂಬೇಡ್ಕರ್ ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಭಾರತ ಇಬ್ಬಾಗಬೇಕಾದರೆ ಇಲ್ಲಿರುವ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು. ಅಲ್ಲಿರುವ ಹಿಂದುಗಳು ಭಾರತಕ್ಕೆ ಬರಬೇಕೆಂದು ಅಂಬೇಡ್ಕರ್ ಹೇಳಿದ್ದರು ಎಂದರು.
ಮುಸ್ಲಿಮರು ಅನ್ಯ ಧರ್ಮದವರನ್ನು ಸಹೋದರತೆಯಿಂದ ನೋಡಲ್ಲ ಎಂದು ಅಂಬೇಡ್ಕರ್ ಅವರು ಬರೆದಿದ್ದಾರೆ.
ಕೆಲ ರೋಲ್ ಕಾಲ್ ಲೀಡರ್ ಗಳು ದಲಿತ ಮುಸ್ಲಿಂ ಎಂದು ಹೇಳಿ ಜೀವನ ಮಾಡುತ್ತಾರೋದು ದುರಂತ ಆಗಿದೆ. ಅಂಬೇಡ್ಕರ್ ಅವರ ವಿಚಾರವನ್ನು ಅವರ ಕಷ್ಟ ಜೀವನವನ್ನು ಇವರ್ಯಾರು ಅಧ್ಯಯನ ಮಾಡಿಲ್ಲ. ಅಂಬೇಡ್ಕರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಇಂಥ ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುತ್ತಾರೆ ಎಂದರು.