ವಿಜಯಪುರ: ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದವನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಇನ್ನೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರವೇ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಬೆಳಗಾವಿ ನಮ್ದು ನಮ್ದು ಎಂದರು. ಆದಷ್ಟು ಬೇಗನೆ ಮಹಾರಾಷ್ಟ್ರ ಕರ್ನಾಟಕದ ಗಡಿ ವಿವಾದವನ್ನು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಬಗೆಹರಿಸಬೇಕು. ಇಲ್ಲದೇ ಹೋದ್ರೇ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ನೀಡಿ ಜಿಲ್ಲಾಡಳಿತ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.