ವಿಜಯಪುರ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಹಿನ್ನಲೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಜಿಲ್ಲಾ ಬಿಜೆಪಿ ಘಟಕದಿಂದ ಸಂಭ್ರಮಾಚರಣೆಯನ್ನು ಗುರುವಾರ ಮಾಡಿದರು.
ಸಿದ್ದೇಶ್ವರ ದೇವಸ್ಥಾನದ ಎದುರು ಗೆಲುವಿನ ಆಚರಣೆ ಮಾಡಿ, ಪ್ರಧಾನಿ ಮೋದಿ, ಗೃಹ ಸಚಿವ ಅಮೀತ್ ಶಾ ಪರ ಘೋಷಣೆ ಕೂಗಿದರು.
ಇದು ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು ಎಂದು ಬಿಜೆಪಿ ಮುಖಂಡರು ಹೇಳಿದರು. ಈ ವೇಳೆಯಲ್ಲಿ ಸಿದ್ದೇಶ್ವರ ದೇವಸ್ಥಾನ ಎದುರು ಪಟಾಕಿ ಹೊಡೆದು, ಸಿಹಿ ಹಂಚಿ ಸಂಭ್ರಮಿಸಿದರು