ವಿಜಯಪುರ: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯ ಎದುರು ಶುಕ್ರವಾರ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇನ್ನು ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆ ಮಾಡಬೇಕು. ಎನ್ಇಪಿ 2020 ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳ ಶಿಕ್ಷಣ ವೇತನ ಆದಷ್ಟು ಬೇಗನೆ ಜಾರಿಗೆ ಜೊತೆಗೆ ವಿದ್ಯಾರ್ಥಿಗಳ ಹಾಸ್ಟೆಲ್ ಗಳಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.