ವಿಜಯಪುರ: ಜಿಲ್ಲೆಯ ವಿವಿಧ ಕೆರೆಗಳ ಹೂಳೆತ್ತುವ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರಗೆ ಭಾರತೀಯ ಜೈನ್ ಸಂಘಟನೆ ವಿಜಯಪುರ ಹಾಗೂ ಜಲಬಿರಾದರಿ ಸಂಸ್ಥೆಯವರು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸೋಮವಾರ ಜೈನ್ ಸಂಘಟನೆ ಪದಾಧಿಕಾರಿಗಳು ಹಾಗೂ ಜಲಬಿರಾದರಿ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಜಿಲ್ಲಾಧಿಕಾರಿಗೆ
ಭೇಟಿ ಮಾಡಿ, ಜಿಲ್ಲೆಯ ವಿವಿಧ ಕೆರೆಗಳ ಹೂಳೆತ್ತುವ ಕಾಮಗಾರಿ ಕೈಗೊಳ್ಳಬೇಕು. ಹೂಳೆತ್ತುವ ಕಾಮಗಾರಿಗಳ ಕುರಿತು ಅತ್ಯಮೂಲ್ಯ ನೀರಿನ ಬಳಕೆ, ಸಂರಕ್ಷಣೆ ಮಾಡುವ ಕುರಿತು ಜನರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸಲು ವಿವಿಧ
ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅದಕ್ಕಾಗಿ ಡಿಸೆಂಬರ್ 26 ರಂದು ಸಭೆ ನಡೆಸಿ ಕಾಮಗಾರಿ ಕೈಗೊಳ್ಳುವ ಕುರಿತು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡು ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.