ವಿಜಯಪುರ: ಜಿಲ್ಲಾ ಲೋಕಾಯುಕ್ತ ಪೋಲಿಸ್ ಅಧೀಕ್ಷಕರಾದ ಅನಿತಾ ಹದ್ದನ್ನವರ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಾ ಆಸ್ಪತ್ರೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ, ಸೌಲಭ್ಯ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳ ಕಾರ್ಯನಿರ್ವಹಣೆ, ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ, ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಆನಂದ ಟಕ್ಕಣ್ಣವರ, ಪೋಲಿಸ್ ನಿರೀಕ್ಷಕ ಆನಂದ ದೋಣಿ ಉಪಸ್ಥಿತರಿದ್ದರು.