ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾರೆ. ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತಪಟ್ಟಿದ್ದಾರೆ.
ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ ಆಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.