ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ವಿಜಯಪುರ ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಶುಕ್ರವಾರ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಜೆಡಿಎಸ್ ವಕ್ತಾರರಾದ ಸ್ನೇಹಲತಾ ಶೆಟ್ಟಿ ಮಾತನಾಡಿ, ೨೦೨೩ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವದು ಶತಸಿದ್ದ ಮತ್ತು ಮುಂಬರುವ ಪಂಚರತ್ನ ಯಾತ್ರೆ ಎಲ್ಲಾ ರಾಜಕೀಯ ಪಕ್ಷಗಳಿಗೆ ನಡುಕ ಹುಟ್ಟುವಂತೆ ಮಾಡುತ್ತಿದೆ ಎಂದರು. ಈ ವೇಳೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.