ಬೆಳಗಾವಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಅಧಿವೇಶನದಲ್ಲಿ ಗಡಿ ವಿವಾದ ಸೇರಿದಂತೆ ವಿವಿಧ ಅಭಿವೃದ್ಧಿ ಕುರಿತು ಚರ್ಚೆ ಆಗಲಿವೆ. ಸೋಮವಾರದಿಂದ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಲಿದ್ದು, ಒಳಗೆ ರಾಜಕೀಯ ಕದನ, ಹೊರಗೆ ಸಾಲು-ಸಾಲು ಧರಣಿ ನಡೆಸಲಾಗುತ್ತದೆ. ಮೀಸಲು ಸೇರಿದಂತೆ ಹಲವು ವಿಚಾರ ಮುಂದಿಟ್ಟುಕೊಂಡು ಪ್ರತಿಭಟನೆ, ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಂಘಟನೆಗಳಿಂದ ತಯಾರಿ ನಡೆಸಿದೆ. ಅದಕ್ಕಾಗಿ ಸುವರ್ಣ ಸೌಧದ ಬಳಿ ಪ್ರತಿಭಟನೆ ಟೆಂಟ್ ನಿರ್ಮಾಣವಾಗುತ್ತಿದೆ.