ವಿಜಯಪುರ: ವಿಜಯಪುರ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ 13 ಮತ್ತು 14ನೇ ವಾರ್ಷಿಕ ಘಟಿಕೋತ್ಸವ ಸೋಮವಾರ ನಡೆಯಿತು. ಘಟಿಕೋತ್ಸವನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ಅಲ್ಲದೇ, 167 ವಿದ್ಯಾರ್ಥಿಗಳಿಗೆ 202 ಚಿನ್ನದ ಪದಕ, 23,911 ವಿದ್ಯಾರ್ಥಿನಿಯರಿಗೆ ಪದವಿ ಪ್ರಧಾನ, 55 ವಿದ್ಯಾರ್ಥಿನಿಯರಿಗೆ ಪಿಹೆಚ್ಡಿ ಪ್ರಧಾನ ಮಾಡಿದರು. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಗೋಲ್ಡ್ ಮೆಡಲ್, ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು. ಅಲ್ಲದೇ,
ಈ ಬಾರಿ ಮೂವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯಿತು.
ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಡಾ. ಎಸ್ ಜಿ ಸುಶೀಲಮ್ಮ, ಗುಜರಾತ್ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಟಾರೆ, ಬೀದರ್ ಗುರುನಾನಕ್ ಸಮೂಹ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಈ ಸಂದರ್ಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ತುಳಸಿಮಾಲಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.