ವಿಜಯಪುರ: ರಸ್ತೆ ಬದಿ ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ ಬಳಿ ನಡೆಸಿದೆ.
ಢವಳಗಿ ಮೂಲದ ಮಹೇಶ್ ದಡ್ಡೆಣನವರ (34) ಸ್ಥಳದಲ್ಲೇ ಅಸುನೀಗಿದ್ದಾರೆ. ರಸ್ತೆ ಪಕ್ಕದಲ್ಲೇ ಕಬ್ಬು ತುಂಬಿದ ಟ್ರ್ಯಾಕ್ಟರ್ ನಿಲ್ಲಿಸಿದಕ್ಕೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.