ವಿಜಯಪುರ: ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿಚೌಕ್ ವರೆಗೂ ಮಂಗಳವಾರ ಪ್ರತಿಭಟನಾ ರ್ಯಾಲಿ ಮಾಡಿದರು.
ಈ ವೇಳೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದರು. ಅಲ್ಲದೇ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾವಚಿತ್ರ ಬೆಂಕಿ ಹಚ್ಚಿ ಕಿಡಿಕಾರಿದರು. ಅದಕ್ಕಾಗಿ ಭಯೋತ್ಪಾದಕರಿಗೆ ಬೆಂಬಲ ನೀಡದೇ ಶಾಂತಿ ಸುವ್ಯವಸ್ಥೆಕ್ಕೆ ಧಕ್ಕೆ ಆಗದಂತೆ ಕಾಂಗ್ರೆಸ್ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.