ಬೆಳಗಾವಿ: ವಿಧಾನ ಪರಿಷತ್ ನೂತನ ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾದರು. ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹೊರಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಂಡರು. ಈ ವೇಳೆ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆಯಾದರು.