ವಿಜಯಪುರ: ಬೀದಿ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಿಡಿಗೇಡಿಗಳು ಹಲ್ಲೆಗೈದಿರುವ ಘಟನೆ ವಿಜಯಪುರ ನಗರದ ಮೀನಾಕ್ಷಿ ಚೌಕ್ನಲ್ಲಿ ತಡರಾತ್ರಿ ನಡೆದಿದೆ.
ಕುಲಕರ್ಣಿ ಎಂಬುವರು ಹಲ್ಲೆಗೊಳಗಾದವರು. ಅಲ್ಲದೇ, ಹಲ್ಲೆಗೈದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಅದೇ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ಜಾವೆದ್, ದಿನೇಶ್ ಎಂಬುವರು ಕುಲಕರ್ಣಿಗೆ ಪ್ರಥಮ ಚಿಕಿತ್ಸೆ ನೀಡಿ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಉಪಚಾರಕ್ಕೆ ಉಚಿತವಾಗಿ ವೈದ್ಯಕೀಯ ಸಲಕರಣೆಗಳನ್ನು ಜ್ಯೋತಿ ಮೆಡಿಕಲ್ ಮಾಲೀಕರಾದ ಕುಮಾರಗೌಡ ಅವರು ನೀಡಿ ಮಾನವೀಯತೆ ಮೆರೆದಿದ್ದಾರೆ.