ವಿಜಯಪುರ: ಜಿಲ್ಲಾ ಪಂಚಾಯತಿ ಕೌಶಲ್ಯಾಭಿವೃಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಹಾಗೂ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೊಮಲಿಂಗ ಗೆಣ್ಣೂರು 2024-25ನೇ ಸಾಲಿನ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೇ ಹಾಗೂ ಕರ ಪತ್ರ ಅನಾವರಣ ಗೋಳಿಸಿ ಚಾಲನೆ ನೀಡಿದರು. ಈ ಸಂಧರ್ಬದಲ್ಲಿ ನೋಡಲ್ ಅಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಜಿಲ್ಲಾ ಕೌಶಲ್ಯಭಿವೃಧಿ ಅಧಿಕಾರಿಗಳಾದ ಶ್ರೀ ಸಿ.ಬಿ. ಕುಂಬಾರ ಮತ್ತು ಉದ್ಯೋಗಾಧಿಕಾರಿಗಳಾದ ಶ್ರೀ ಮಹೇಶ ಜೆ.ಮಾಳವಾಡೆಕರ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಿಜಯಪುರ ಹಾಗೂ ಜಿಲ್ಲೆಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.