ವಿಜಯಪುರ: ಹಳೆ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಕೊಣ್ಣೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಇನ್ನು ಘರ್ಷಣೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಲಖು ಆಗಿದ್ದಾರೆ. ಘಟನೆಯಲ್ಲಿ ಮನೆ, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದ ಐದು ಬೈಕ್, ಒಂದು ಕ್ರೂಸರ್, ಎರಡು ತ್ರಿಚಕ್ರ ವಾಹನ ಜಖಂಗೊಂಡಿವೆ. ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.