ವಿಜಯಪುರ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಮಾಜಿ ಮಹಾನಗರ ಪಾಲಿಕೆ ಸದಸ್ಯ ಮೈನುದ್ದಿನ ಬೀಳಗಿ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ರಾಜು ಆಲಗೂರ ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅನುಮೋದನೆ ಮೇರೆಗೆ ಬೀಳಗಿ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ತಕ್ಷಣವೇ ಅಧಿಕಾರ ವಹಿಸಿಕೊಂಡು ಮುಖಂಡರೊಂದಿಗೆ ಕಾರ್ಯನಿರ್ವಹಿಸುವಂತೆ ಆದೇಶ ತಿಳಿಸಿದ್ದಾರೆ.