ವಿಜಯಪುರ: ವಿಜಯಪುರ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿನ 33ಕೆವ್ಹಿ ನಾಗಠಾಣ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸುವ ತುರ್ತು ಕಾರ್ಯ ಕೈಗೊಳ್ಳುವುದರಿಂದ ಡಿ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಾಗಠಾಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವ್ಹಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.