ವಿಜಯಪುರ:ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಮೂವರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಜುಮನಾಳ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಅಕ್ಷಯ, ಶುಭಂ, ಬಾಗೇಶ ಮೃತಪಟ್ಟಿರುವ ದುರ್ದೈವಿ. ಇನ್ನ ಬೈಕ್ ಮೇಲೆ ಹೋಗುತ್ತಿದ್ದ ವೇಳೆಯಲ್ಲಿ ಕಾರ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತಪಟ್ಟಿರುವ ದುರ್ದೈವಿಗಳು ವಿಜಯಪುರ ನಿವಾಸಿಗಳು ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.