ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಅನಾರೋಗ್ಯ ಹಿನ್ನೆಲೆ ಶ್ರೀಗಳ ಆರೋಗ್ಯ ವಿಚಾರಿಸಲು ಜ್ಞಾನ ಯೋಗಾಶ್ರಮಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಬುಧವಾರ ಭೇಟಿ ನೀಡಿದರು.
ವಿಜಯಪುರ ನಗರದಲ್ಲಿರುವ ಜ್ಞಾನ ಯೋಗಾಶ್ರಮದ ಆವರಣದಲ್ಲಿ ಭಕ್ತರಿಗೆ ದರ್ಶನ ನೀಡಿದ ಬಳಿಕ ವಿಶ್ರಾಂತಿಗೆ ತೆರಳಿರುವ ಸಿದ್ಧೇಶ್ವರ ಶ್ರೀಗಳ ಕೊಠಡಿಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಹಾಗೂ ಇತರೆ ಮುಖಂಡರು ಶ್ರೀಗಳ ದರ್ಶನ ಮಾಡಿದರು. ಸಚಿವರು
ಸ್ವಾಮೀಜಿಗಳ ದರ್ಶನದ ಬಳಿಕ ಮಾತನಾಡಿದ ಶಿಕ್ಷಣ ಸಚಿವರು, ನೈತಿಕ ಶಿಕ್ಷಣದ ಬಗ್ಗೆ ಸ್ವಾಮೀಜಿಗಳ ಗಮನಕ್ಕೆ ತಂದಿದ್ದೇನೆ. ನೈತಿಕ ಶಿಕ್ಷಣದ ವಿಚಾರವಾಗಿ ಮುಂಬರುವ ದಿನಗಳಲ್ಲಿ ಒಂದು ಸಮಾವೇಶ ಆಯೋಜನೆ ಮಾಡಲಾಗುತ್ತದೆ ಎಂದರು.