ವಿಜಯಪುರ: ತೊಗರಿ, ಕಬ್ಬು ಸೇರಿದಂತೆ ಇನ್ನಿತರೆ ಬೆಳೆಗಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಸಂಘದಿಂದ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಅತೀವೃಷ್ಟಿ ಹಾಗೂ
ಹವಾಮಾನ ವೈಪರೀತ್ಯದಿಂದಾಗಿ ತೊಗರಿ ಮತ್ತು ಇನ್ನಿತರ ಬೆಳೆಗಳು ತುಂಬಾ ಹಾನಿಗೊಳಗಾಗಿದೆ. ಅಲ್ಲದೇ, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು. ವಿದ್ಯುತ್ ಖಾಸಗೀಕರಣ ಕಾಯ್ದೆ ಕೈಬಿಡಬೇಕು ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿಯೇ ಪ್ರಮುಖ ತೋಟಗಾರಿಕೆ ಬೆಳೆಯಾದ ತೊಗರಿ ಸೇರಿ ಇನ್ನಿತರ ಬೆಳೆಗಳು ಸಂಪೂರ್ಣ ಹಾಳಾಗಿದೆ. ಅದಕ್ಕಾಗಿ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರ ಮನವಿ ಸಲ್ಲಿಸಿದರು.