ವಿಜಯಪುರ: ಬೈಕ್ ಹಾಗೂ ಟಿಪ್ಪರ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ನಗರದ ಜೆಎಸ್ಎಸ್ ಆಸ್ಪತ್ರೆಯ ಬಳಿ ನಡೆದಿದೆ. ಇನ್ನು ಮೃತಪಟ್ಟಿರುವ ಹರೀಶ್ ಎಂದು ಗುರುತಿಸಲಾಗಿದೆ. ಅಲ್ಲದೇ, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ ವಾಹನದಲ್ಲಿದ್ದ ಸವಾರನಿಗೆ ಸಣ್ಣಪುಟ್ಟ ಗಾಯಾಳು ಆಗಿವೆ. ಟಪ್ಪರ ಹಾಗೂ ಬೈಕ್ ಅಪಘಾತದಲ್ಲಿ ಟಿಪ್ಪರ ಪಲ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.