K1N ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರು ಅಸುನೀಗಿದ್ದಾರೆ. ಅಹ್ಮದಾಬಾದ್ನ ಮೆಹ್ತಾ ಆಸ್ಪತ್ರೆಯಲ್ಲಿ ಶತಾಯುಷಿ ಹೀರಾ ಬೆನ್ ನಿಧನರಾದರು.
ಅವರ ಆರೋಗ್ಯದಲ್ಲಿ ಸಮಸ್ಯೆ ಆಗಿದ್ದು, ಗುಜರಾತ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತು ಪ್ರಧಾನಿ ಮೋದಿ ತಾಯಿಯ ನಿಧನ ಮಾಹಿತಿ ಹಂಚಿಕೊಂಡಿದ್ದಾರೆ. ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು ಎಂದು ತಾಯಿಯ ನೆನೆದು ಬಾವುಕರಾಗಿ ಮಾತುಗಳನ್ನು ಹಂಚಿಕೊಂಡಿದ್ದಾರೆ.