ವಿಜಯಪುರ: ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಕ್ರಾಸ್ ಬಳಿ ನಡೆದಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ನಿವಾಸಿ
ರುದ್ರಯ್ಯ ಮಲ್ಲಯ್ಯ ಹಿರೇಮಠ (48) ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಬೈಕ್ ಸವಾರನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.