ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ನಡೆಯುವ ಚುನಾವಣೆಯನ್ನು ಜ.27ರಂದು ನಿಗದಿಪಡಿಸಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಯಿAದ 11ಗಂಟೆ ವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ಮಧ್ಯಾಹ್ನ 1ಗಂಟೆಯಿಂದ ಚುನಾವಣೆ ನಡೆದು ಅಂದೇ ಪಲಿತಾಂಶ ಘೋಷಣೆ ಮಾಡಲಾಗುವುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.